ಭಟ್ಕಳ [ 23 ಅಕ್ಟೋಬರ್ ] ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದು. ಈ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ನೀಡುವಂತೆ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಒಂದು ತಿಂಗಳೊಳಗಾಗಿ ಇತ್ಯರ್ಥಪಡಿಸುವಂತೆ ಒತ್ತಾಯಿಸಿ ದೆಹಲಿಯ ಪ್ರಧಾನಿ ಕಛೇರಿಗೆ ಮನವಿ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಮೂಸಾ ಶರೀಫ್ ನೇತೃತ್ವದ ತಂಡ ಮಂಗಳೂರಿನಿಂದ ದೇಹಲಿಯವರೆಗೂ ಪಾದಯಾತ್ರೆಯ ಮೂಲಕ ತೆರಳುತ್ತಿದ್ದು ಇಂದು ಆ ತಂಡ ಭಟ್ಕಳ ಪಟ್ಟಣವನ್ನು ತಲುಪಿದೆ.
ಅಕ್ಟೋಬರ್ 24 ರ ಬೆಳಿಗ್ಗೆ ಒಂಬತ್ತು ಗಂಟೆಗೆ ಭಟ್ಕಳ ಮುಖ್ಯವೃತ್ತದಿಂದ ತಮ್ಮ ಪ್ರಯಾಣವನ್ನು ಮುಂದುವರಿಸಲಿದೆ.